ಬೆಳ್ತಂಗಡಿ: ರೋಟರಿ ವಿಶ್ವ ಪೋಲಿಯೋ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪೋಲಿಯೋ ಜಾಗೃತಿ ವಾಹನ ಜಾಥಾವು ಅಕ್ಟೋಬರ್ 24ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿತು.
ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಇಂಟರ್ಯಾಕ್ಟ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಎಲ್ಇಡಿ ಪ್ರದರ್ಶನ ವ್ಯವಸ್ಥೆ ಹೊಂದಿದ ವಾಹನದ ಮೂಲಕ ಪೋಲಿಯೋ ನಿರ್ಮೂಲನೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಶ್ರೀಧರ ಕೆ.ವಿ., ಕಾರ್ಯದರ್ಶಿ ರಾಘವೇಂದ್ರ ಪಿದಮಲೆ ಹಾಗೂ ಕ್ಲಬ್ ಸದಸ್ಯರಾದ ಶ್ರೀನಾಥ್ ಕೆ.ಎಂ. ಮತ್ತು ಗೋಪಾಲಕೃಷ್ಣ ಗುಲ್ಲೊಡಿ ಭಾಗವಹಿಸಿದ್ದರು.
ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಈ ಜಾಗೃತಿ ವಾಹನ ಜಾಥಾವು ಪೋಲಿಯೋ ನಿರ್ಮೂಲನೆ, ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸುವ ಮಹತ್ವ ಹಾಗೂ ಮಕ್ಕಳ ಆರೋಗ್ಯ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ.