ಬಾಲಕರ ವಿಭಾಗದಲ್ಲಿ ಎಸ್.ಡಿ.ಎಂ. ಉಜಿರೆಗೆ ಪ್ರಥಮ, ವಾಣಿ ಕಾಲೇಜಿಗೆ ದ್ವಿತೀಯ | ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಕಾಲೇಜಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಲಪ್ಪ ಗೌಡ ವಹಿಸಿದ್ದರು. ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ ಪಂದ್ಯಾಟವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಆನಾವು ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಭಾಗವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಅಕ್ಷತ್ ಕೆ. ವಂದಿಸಿದರು. ಉಪನ್ಯಾಸಕ ಸುರೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಬಾಲಕರ ವಿಭಾಗದಲ್ಲಿ 15 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ 5 ತಂಡಗಳು ಸೇರಿದಂತೆ ಒಟ್ಟು 20 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.

ಪಂದ್ಯಾಟದ ಫಲಿತಾಂಶಗಳು:

ಬಾಲಕರ ವಿಭಾಗ

  • ಪ್ರಥಮ ಸ್ಥಾನ – ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ.
  • ದ್ವಿತೀಯ ಸ್ಥಾನ – ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ.

ಬಾಲಕಿಯರ ವಿಭಾಗ

  • ಪ್ರಥಮ ಸ್ಥಾನ – ಪದವಿ ಪೂರ್ವ ಕಾಲೇಜು, ಮುಂಡಾಜೆ.
  • ದ್ವಿತೀಯ ಸ್ಥಾನ – ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರವೀಣ್ ವಿ.ಜಿ. ಹಾಗೂ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜು, ಉಜಿರೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ ಧರ್ಮೇಂದ್ರ ಗೌಡ ಭಾಗವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಸುಧೀರ್ ಕೆ.ಎನ್. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…