ವಿಶ್ವಮಂಗಳ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವು ದಿನಾಂಕ 1-11-2026ರಂದು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು.

ಮುಖ್ಯ ಅತಿಥಿಗಳಾದ ಮಂಗಳೂರಿನ ಬದ್ರಿಯಾ ಪಿ.ಯು. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ಇಸ್ಮಾಯಿಲ್ ಬಿ, ಕನ್ನಡ ಭಾಷೆ ಹಾಗೂ ನಾಡಿನ ವೈಭವವನ್ನು ಎತ್ತಿಹಿಡಿಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದಾದದ್ದು ಎಂದರು. ವಿಶ್ವಮಂಗಳ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಪ್ರೊ. ಜಗದೀಶ್ ಪ್ರಸಾದ್ ಡಿ. ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿವಿಶ್ವ ಮಂಗಳ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಪ್ರೊ. ಪ್ರಕಾಶ ಎಂ., ಕೋಶಾಧಿಕಾರಿ ಶ್ರೀ ಸುಬ್ಬ ನಾಯ್ಕ್, ಮ್ಯಾನೇಜರ್ ರಾಜೇಂದ್ರನ್ ಹಾಗೂ ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯಿನಿಯರು ಉಪಸ್ಥಿತರಿದ್ದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪೂರ್ಣಿಮಾ ಡಿ. ಶೆಟ್ಟಿ ಸ್ವಾಗತಿಸಿದರು. ಕುಮಾರಿ ಲಕ್ಷ್ಮಿ ದಿನದ ಮಹತ್ವ ಕುರಿತು ಮಾತನಾಡಿದರು. ಕುಮಾರಿ ಮಶ್ರೂಫಾ ಕಾರ್ಯಕ್ರಮ ನಿರೂಪಿಸಿದರು, ಪ್ರೌಢಶಾಲೆಯ ಸಹ ಶಿಕ್ಷಕ ರಮೇಶ್ ವಂದನಾರ್ಪಣೆಗೈದರು. ನಾಡಗೀತೆ ಹಾಗೂ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಮೆರಗನ್ನು ಹೆಚ್ಚಿಸಿದವು.