ಆಲಂಕಾರು : ದುರ್ಗಾಂಬಾ ಪದವಿ ಪೂರ್ವ ಕಾಲೇಜು ನಲ್ಲಿ ವಲಯ ಮಟ್ಟದ ಪ್ರೌಢಶಾಲಾ ಮಟ್ಟದ ಬಾಲಕ,ಬಾಲಕಿಯರ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಉದ್ಘಾಟಿಸಿ, ಕ್ರೀಡೆ ಎಂಬುದು ನಮ್ಮ ಬದುಕಿನ ಅವಿಭಾಜ್ಯ ಅಂಗ .ಕ್ರೀಡಾಕೂಟ ನಮಗೆ ಸೋಲು,ಗೆಲುವಿನ ಪಾಠವನ್ನು ತಿಳಿಸಿಕೊಡುವ ಮೂಲಕ ಜೀವನದಲ್ಲಿ ಯಶಸ್ಸನ್ನು ಹೇಗೆ ಪಡೆಯಬೇಕೆಂದು ತಿಳಿಸಿ ಕೊಡುತ್ತದೆ ಎಂದು ಹೇಳಿದರು. ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆ ಮಾಡಿದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ವಾಲಿಬಾಲ್ ತಾಲೂಕು ಮಟ್ಟದ ವಾಲಿಬಾಲ್ ನ ಆಯೋಜನೆಯಂತೆ ನಡೆದಿದೆ. ಸಂಘಟಿಸಿದ ಆಯೋಜಕರಿಗೆ ಅಭಿನಂದನೆ ಸಲ್ಲಿಸಿ ವಾಲಿಬಾಲ್ ಪಂದ್ಯಾಟಕ್ಕೆ ಶುಭಾಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಅಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಕೊಂಡಾಡಿ, ಪುತ್ತೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಬಾಕಿಲ, ಕಡಬ ತಾಲೂಕು ನೋಡಲ್ ಅಧಿಕಾರಿ ಲೋಕೇಶ್ ಟಿ ಆರ್, ಶ್ರೀ ದುರ್ಗಾಂಬಾ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ , ತಾರಾನಾಥ ರೈ, ವಿಜಯಕುಮಾರ್ ರೈ ಮನವಳಿಕೆ, ಇಂದುಶೇಖರ ಶೆಟ್ಟಿ ಕುಕ್ಕೇರಿ, ರಾಮರಾಜ್ ನಗ್ರಿ, ದಯಾನಂದ ಗೌಡ ಆಲಡ್ಕ, ಹೇಮಂತ ರೈ ಮನವಳಿಕೆ, ಆಡಳಿತಾಧಿಕಾರಿ ಶ್ರೀಪತಿ ರಾವ್ ಹೆಚ್, ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ ರೈ ಮನವಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಿತು. ಸಮಾರೋಪದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಈಶ್ವರಗೌಡ ಪಜ್ಜಡ್ಕ ವಹಿಸಿದ್ದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ ಕೇವಳ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷಎನ್ ಸುಂದರ ಗೌಡ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರೂಪ ಎಂ ಜೆ ಕಾರ್ಯಕ್ರಮ ನಿರೂಪಿಸಿ, ಜನಾರ್ಧನ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶ್ರೇಯಸ್ ರೈ ಧನ್ಯವಾದ ಸಮರ್ಪಿಸಿದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಶ್ರೀರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ದ್ವಿತೀಯ ಸ್ಥಾನವನ್ನು ಸೈಂಟ್ ಅನ್ಸ್ ಕಡಬ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗುಡ್ ಶಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮರ್ದಾಳ ದ್ವಿತೀಯ ಸ್ಥಾನವನ್ನು ಶ್ರೀ ದುರ್ಗಾಂಬಾ ಪ್ರೌಢಶಾಲೆ ಅಲಂಕಾರಿನವರು ಪಡೆದುಕೊಂಡರು ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.