ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್. ಅವರು ಕುಮಟಾದಲ್ಲಿ ನಡೆದ 17 ವರ್ಷದೊಳಗಿನವರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಮ್ಮ ಅತ್ಯುತ್ತಮ ಆಟದ ಪ್ರದರ್ಶನ, ತಂಡದೊಂದಿಗೆ ಸಮನ್ವಯ ಹಾಗೂ ಕ್ರೀಡಾ ಕೌಶಲದ ಮೂಲಕ ಶ್ರೇಯಸ್ ಈ ಸಾಧನೆ ಮಾಡಿದ್ದಾರೆ. ಇವರ ಈ ಯಶಸ್ಸು ಶಾಲೆಗೆ ಹೆಮ್ಮೆ ತಂದಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.ಶ್ರೇಯಸ್ ಅವರ ಈ ಸಾಧನೆಯು ಶಾಲೆಯ ಇತರ ವಿದ್ಯಾರ್ಥಿಗಳಿಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸ್ಫೂರ್ತಿಯಾಗಿದೆ.