ಎಡಪದವು, 14 ನವೆಂಬರ್ 2024: ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟವು ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಅದರಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ನಿಕಿತಾ, ಹರ್ಷಿತಾ ಮತ್ತು ಪ್ರಥಮ ಕಲಾ ವಿಭಾಗದ ಸಂಜನಾ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಭಾಗ್ಯಶ್ರೀ ದ್ವಿತೀಯ ಕಲಾ ವಿಭಾಗದ ಜ್ಯೋತಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಶ್ರೀಮತಿ ಗಾಯತ್ರಿ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀಯುತ ಪ್ರೇಮನಾಥ್ ಶೆಟ್ಟಿ ಇವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.